ಶ್ರೀಕೇಶವನಾಮ
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿನಿನ್ನ ಚರಣ ಸ್ಮರಣೆ ಕರುಣಿಸಯ್ಯ ನಾರಾಯಣ ||1|| ಶೋಧಿಸೆನ್ನ ಭವದ ಕಲುಷ ಬೋಧಿಸಯ್ಯ ಜ್ಞಾನವೆನಗೆಬಾಧಿಸುವಾ ಯಮನ ಬಾಧೆ ಬಿಡಿಸು ಮಾಧವ || 2|| ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ ||3|| ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ ||4|| […]